ಮಂಡ್ಯ : ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಲಭೆ ಹಿಂದೆ ನಿಷೇಧಿತ ಪಿಎಫ್ ಐ ಸಂಘಟನೆ ಕೈವಾಡವಿದೆ ಎಂದು ಶಂಕಿಸಲಾಗಿದೆ.
ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿಂದೆ ಕೇರಳದ ನಿಷೇಧಿದ ಸಂಘಟನೆ ಪಿಎಫ್ ಸಂಘಟನೆ ಕೈವಾಡ ಇರಬಹುದು ಎನ್ನಲಾಗಿದ್ದು, ಗಲಭೆಯಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿರುವ ದೂರಿನಲ್ಲಿ ಇಬ್ಬರು ಕೇರಳ ಮೂಲದವರ ಹೆಸರು ಕೇಳಿಬಂದಿದೆ.
ನಾಗಮಂಗಲ ಗಲಭೆ ಪ್ರಕರಣ ಸಂಬಂದ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಬಂಧಿತ ಆರೋಪಿಗಳ ಪೈಕಿ ಎ ೪೪ ಯೂಸೂಫ್ ಹಾಗೂ ಎ ೬೧ ನಾಸೀರ್ ಎಂಬುವರು ಇಬ್ಬರು ಕೇರಳದ ಮಲಪ್ಪುರಂ ಮೂಲದವರಾಗಿದ್ದು, ಇವರು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರಾಗಿದ್ದರು. ನಾಗಮಂಗಲದಲ್ಲಿ ಕೆಲ ದಿನಗಳಿಂದ ವಾಸವಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದೆ.