ಮಂಡ್ಯ: ನಾಗಮಂಗಲ ಗಲಭೆ ಪ್ರಕರಣದ 52 ಆರೋಪಿಗಳನ್ನು ಪೊಲೀಸರು ಗುರುವಾರ ನಾಗಮಂಗಲದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ ಅವರು ಆರೋಪಿಗಳನ್ನು ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ನಂತರ ಆರೋಪಿಗಳನ್ನು ಪೊಲೀಸರು ಎರಡು ವಾಹನಗಳ ಭದ್ರತೆಯಲ್ಲಿ ನಾಗಮಂಗಲದಿಂದ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕರೆ ತಂದರು.