ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ನಾಗಮಂಗಲ ಕೋಮುಗಲಭೆಗೆ ಸಂಬಂಧಿಸಿದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಆರೋಪಿಸಿದ್ದರು.
ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ೨ ವಿಡಿಯೋ ಲಗತ್ತಿಸಿಸಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ನಾಗಮಂಗಲ ಟೌನ್ ಠಾಣೆಯಲ್ಲಿ ಅರ್ ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಬಿಎನ್ ಎಸ್ ಸೆಕ್ಷನ್ ೧೯೨ರ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.



