ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಡಾ. ಯೂ ನಿಸಾರ್ ಅಹಮದ್ ನಾಗಮಂಗಲಕ್ಕೆ ಭೇಟಿ ನೀಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಗಲಭೆಯಲ್ಲಿ ನೊಂದವರಿಂದ ಮಾಹಿತಿ ಸಂಗ್ರಹ ಮಾಡಿದ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮಧ್ ನೊಂದ ಮುಸ್ಲಿಮರಿಗೆ ಸರಕಾರದಿಂದ ನೆರವು ಕೊಡಿಸುವ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡಿ ಕೂಡ ಭಾಗಿಯಾಗಿದ್ದರು.