ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಮಾತುಕತೆ ನಡೆಸಿದ ಬಳಿಕ ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.