ನಂಜನಗೂಡು: ಬಾಳೆ ತೋಟದಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಯಾರೋ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಿಸಾಕಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದ್ದು,ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ.
ಗಟ್ಟವಾಡಿ ಗ್ರಾಮದ ಶಶಿಕಲಾ (೩೮) ಮೃತ ಮಹಿಳೆ ಎಂದು ತಿಳಿದುಬಂದಿದೆ. ಇನ್ನೂ ನಂಜುಡಪ್ಪ ಅಲಿಯಾಸ್ ಸಿದ್ದಲಿಂಗ ಎಂಬುವವರ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ. ಆದರೆ ತೋಟದ ಮಾಲೀಕ ನಂಜುಂಡಪ್ಪ ನಾಪತ್ತೆಯಾಗಿದ್ದಾನೆ. ಈಗಾಗಲೇ ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಿಳೆಯ ಹಿನ್ನೆಲೆ ಹಾಗೂ ಬಾಳೆ ತೋಟದ ಮಾಲೀಕನ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.