ನಂಜನಗೂಡು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಂದೆ ರೈತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ರೈತ ಮುಖಂಡ ರಘು ಮಾತನಾಡಿ, ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಿ ನಮ್ಮ ಎಲ್ಲಾ ನಾಲೆಗಳಿಗೂ ನೀರು ಹರಿಸಬೇಕು. ನಂಜನಗೂಡು ಕಬಿನಿ ಬಲದಂಡೆ ನುಗು ನಾಲೆಗೆ ನೀರನ್ನು ಬಿಡಬೇಕು. ನಮಗೆ ನೀರು ಕೊಡದೆ ತಮಿಳುನಾಡಿಗೆ ನೀರು ಕೊಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು..
ಯಾವುದೇ ಸರ್ಕಾರ ಬಂದರೂ ರೈತರನ್ನು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರಕ್ಕೆ ಬುದ್ಧಿ ಕಲಿಸಿದ್ದೇವೆ. ಇದೇ ರೀತಿಯಾದರೆ ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸಬೇಕಾಗುತ್ತದೆ ಎಂದು ಗುಡುಗಿದರು.