ಮದ್ದೂರು: ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಹಿನ್ನಲೆ ಮದ್ದೂರು ಪಟ್ಟಣದಲ್ಲಿ ಟಿಬಿ ವೃತದಲ್ಲಿ ಪಟಾಕಿ ಸಿಡಿಸಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಬಿಜೆಪಿ ಮುಖಂಡ ಎಸ್ ಪಿ ಸ್ವಾಮಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಮುಂದಿನ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲೂ ಕೂಡ ಮೈತ್ರಿ ಮುಂದುವರಿಸಿ ಎಂದು ವರಿಷ್ಠರು ತಿಳಿಸಿದ್ದಾರೆ.ಅದರಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತೆ. ಮುಂದೆ ನಮ್ಮ ದೇಶ ಹಾಗು ರಾಜ್ಯ ಮತಷ್ಟು ಅಭಿವೃದ್ಧಿಕಾಣಲಿದೆ ಎಂದು ಬಿಜೆಪಿ ಮುಖಂಡ ತಿಳಿಸಿದರು.