ಕುಂದಗೋಳ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹತ್ತು ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಜನಪರ ಯೋಜನೆ ನೀಡದೇ ದೇಶದ ಜನರ ಕೈಗೆ ಖಾಲಿ ಚೊಂಬು ನೀಡಿದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹರಿಹಾಯ್ದರು. ಅವರು ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿಯ ೨೭ ಸಂಸದರು ಆಯ್ಕೆಯಾಗಿದ್ದರೂ ಈ ಭಾಗದ ಪ್ರಮುಖ ಕುಡಿಯುವ ನೀರಿನ ಯೋಜನೆ ಯಾಗಿರುವ ಮಹದಾಯಿ ಹೋರಾಟಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಕೇವಲ ೧೦ ತಿಂಗಳಲ್ಲಿ ಚುನಾವಣಾ ಪೂರ್ವ ಘೋಷಣೆ ಮಾಡಿದ್ದ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಪ್ರತಿ ಮನೆಗೂ ಸರ್ಕಾರದ ಸೌಲಭ್ಯ ತಲುಪುವಂತೆ ಮಾಡಿದ್ದೇವೆ. ಇದು ನಮ್ಮ ಸರ್ಕಾರದ ಸಾಧನೆ ಎಂದರು.