ಮಂಡ್ಯ : ೩ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಮಂಡ್ಯದ ಶಕ್ತಿ ದೇವತೆ ಕಾಳಿಕಾಂಬ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ, ಉರುಳು ಸೇವೆ ನಡೆಸಿ, ಈಡುಗಾಯಿ ಹೊಡೆದು ಪೂಜೆ ಸಲ್ಲಿಸಿದರು. ಮೋದಿ ಅವರು ಉತ್ತಮ ಆಡಳಿತ ನಡೆಸಲಿ, ಯಾವುದೇ ತೊಂದರೆ ಆಗದಿರಲಿ ಎಂದು ಪೂಜೆ ಮಾಡಿಸಿದರು.
ಮೋದಿ ಸೇರಿದಂತೆ ವಿವಿಧ ನಾಯಕರ ಪರ ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು. ಇದೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯರಿಂದ ಉರುಳು ಸೇವೆ ಮಾಡಿದರು.