ಒಡಿಶಾ: ಪ್ರಧಾನಿ ನರೇಂದ್ರ ಮೋದಿ ಅವರ ಜಾತಿ ಯಾವುದು ಎಂಬುದರ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಸ್ತಾಪಿಸಿದ್ದಾರೆ. ರೇಂದ್ರ ಮೋದಿ, ಹಿಂದುಳಿದ ವರ್ಗದವರಲ್ಲ(ಒಬಿಸಿ) ಸಾಮಾನ್ಯ ವರ್ಗದಲ್ಲಿಜನಿಸಿದ್ದಾರೆ ಎಂದು ಹೇಳಿದ್ದಾರೆ. ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಇಂದು ಗುರುವಾರ ಮಾತನಾಡಿದ ಕಾಂಗ್ರೆಸ್ ಸಂಸದ, ಮೋದಿ ಅವರು ಪ್ರತಿ ಬಾರಿಯೂ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಾರೆ.
ಆದರೆ, ಅವರು ನಿಜವಾದ ಜಾತಿ ಹಿಂದುಳಿದ ವರ್ಗವಲ್ಲ. ಅವರು ಗುಜರಾತಿನ ‘ಟೆಲಿ’ ಎಂಬ ಜಾತಿಯಲ್ಲಿ ಜನಿಸಿದ್ದಾರೆ. ಇದು ಮೊದಲು ಒಬಿಸಿಯಲ್ಲಿ ಇರಲಿಲ್ಲ. ೨೦೦೦ನೇ ಇಸ್ವಿಯಲ್ಲಿ ಅದನ್ನು ಒಬಿಸಿ ಪಟ್ಟಿಗೆ ಸೇರಿಸಲಾಯಿತು ಎಂದು ರಾಹುಲ್ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಜನರ ಬಳಿ ಬಂದಾಗ ಪ್ರತಿ ಬಾರಿಯೂ ಮೋದಿ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಇಡೀ ದೇಶಕ್ಕೆ ಸುಳ್ಳು ಹೇಳಿದ್ದಾರೆ.
ಹಿಂದುಳಿದ ವರ್ಗದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಗೆ ಸೇರಿದವರು. ನೀವು ಇದನ್ನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿ ಎಂದು ಕರೆ ನೀಡಿದರು. ಮೋದಿ ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ ಕಾರಣ, ದೇಶದಲ್ಲಿ ಜಾತಿ ಗಣತಿ ನಡೆಸಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜಾತಿಯ ವಿಚಾರದಲ್ಲೂ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.