ಮೈಸೂರು: ಜೈಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮೈಸೂರಿನ ಶ್ರಿರಾಮ ಪುರದಲ್ಲಿ ರಾಷ್ಟ್ರೀಯ ರಕ್ಷಣಾ ದಿನಾಚರಣೆಯನ್ನು ಮಾರ್ಚ್ 3ರ ಮಧ್ಯಾಹ್ನ 3:00ಗೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರದ ಏಕತೆ, ಭದ್ರತೆ ಹಾಗೂ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷಾಂತರ ಸೈನಿಕರಿಗೆ ಗೌರವ ಸಮರ್ಪಿಸಲಾಗುವುದು ಎಂದು ಋಗ್ವೇದಿ ಯೂತ್ ಕ್ಲಬ್ ಅಧ್ಯಕ್ಷರಾದ ಶರಣ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ.