Sunday, April 20, 2025
Google search engine

Homeರಾಜ್ಯಸುದ್ದಿಜಾಲನಾಳೆ ರಾಷ್ಟ್ರೀಯ ಲೋಕ್ ಅದಾಲತ್

ನಾಳೆ ರಾಷ್ಟ್ರೀಯ ಲೋಕ್ ಅದಾಲತ್

ಮಡಿಕೇರಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಾಳೆ ಮಾರ್ಚ್೯ ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‌ಇಆರ್‌ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‌ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೨೩೭೩, ಟೋಲ್ ಫ್ರೀ ಸಂಖ್ಯೆ ೧೮೦೦೪೨೫೯೦೯೦೦ ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular