ಬೆಂಗಳೂರು: ದೇಶಾದ್ಯಂತ ಶುಕ್ರವಾರ ರಾಷ್ಟ್ರೀಯ ಬಾಹ್ಯಾಕಾಶ ದಿನಾಚಾರಣೆ ಆಚರಿಸಲಾಗುತ್ತಿದೆ. ಕಳೆದ ವರ್ಷ ಆಗಸ್ಟ್ 23ರಂದು ಭಾರತ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆಯ ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿನ “ಶಿವ ಶಕ್ತಿ” ಬಿಂದುವಿನಲ್ಲಿ ಇಳಿದ ದಿನವನ್ನು ಸ್ಮರಿಸಲೆಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ.
ಬ್ಯಾಹಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರನ್ನು ಅಜರಾಮರವಾಗಿಸಲು ಹಗಲಿರುಳು ಶ್ರಮಿಸುತ್ತಿರಿವ ಇಸ್ರೋದ ವಿಜ್ಞಾನಿಗಳಿಗೆ ಮತ್ತು ಅಭಿಯಂತ್ರರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಶುಭಾಶಯ ತಿಳಿಸಿದ್ದಾರೆ.
ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕರೆ ಮೇರೆಗೆ ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ. ಚಂದ್ರಯಾನ-3 ಯೋಜನೆಯ ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿನ ಯಶಸ್ವಿಯಾಗಿ ಇಳಿಸಿದ ನೆನಪಿಗಾಗಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆಚರಿಸಲಾಗುತ್ತಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದು, ನಾಯಕನಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಚಂದ್ರಯಾನ-3 ಯೋಜನೆ ಯಶಸ್ವಿ ಹಿಂದೆ ಬಹೃತ್ ಕೈಗಾರಿಕಾ ಸಚಿವಾಲಯದ ಬಹು ದೊಡ್ಡ ಕೊಡುಗೆಯೂ ಇದೆ. MHI-ಇನ್‌ಸ್ಟ್ರುಮೆಂಟೇಶನ್ ಲಿಮಿಟೆಡ್ (IL), FCRI, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ , ಮತ್ತು ಹಿಂದೂಸ್ತಾನ್ ಮೆಷಿನ್ ಟೂಲ್ಸ್ (HMT) ಅಡಿಯಲ್ಲಿ ನಾಲ್ಕು CPSE ಗಳು ಚಂದ್ರಯಾನ-3 ರ ಯಶಸ್ಸಿಗೆ ಉತ್ಪನ್ನಗಳನ್ನು ಪೂರೈಸಿದವು ಎಂದು ತಿಳಿಸಿದರು.
ಈ ಆಚರಣೆಯು ಇಸ್ರೋದ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಸಮರ್ಪಣೆ. ಮತ್ತು ನಮ್ಮ ರಾಷ್ಟ್ರದ ಕೈಗಾರಿಕೆಗಳ ಸಹಯೋಗದ ಪ್ರಯತ್ನಗಳಿಗೆ ಚಂದ್ರಯಾನ-3 ಸಾಕ್ಷಿಯಾಗಿದೆ ಎಂದರು.