“ಗುಲ್ಟು’ ಖ್ಯಾತಿಯ ನವೀನ್ ಶಂಕರ್ ಅಭಿನಯದ “ಕ್ಷೇತ್ರಪತಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. “ಕ್ಷೇತ್ರಪತಿ’ ಸಿನಿಮಾದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಿರುವ “ಕ್ಷೇತ್ರಪತಿ’ ಟೀಸರ್ ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
“ಆಶ್ರಗ ಕ್ರಿಯೇಷನ್ಸ್’ ಲಾಂಛನದಲ್ಲಿ ನಿರ್ಮಾಣವಾಗಿರುವ “ಕ್ಷೇತ್ರಪತಿ’ ಪೊಲಿಟಿಕಲ್ ಡ್ರಾಮಾ ಕಥಾಹಂದರದ ಸಿನಿಮಾವಾಗಿದ್ದು, ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥಾ ಹಂದರವಾಗಿದ್ದು, ಹಾಗಾಗಿ ಸಿನಿಮಾದ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಸಲಾಗಿದೆ.
ಚಿತ್ರದಲ್ಲಿ ನವೀನ್ ಶಂಕರ್‌ಗೆ ಅರ್ಚನಾ ಜೋಯಿಸ್ ನಾಯಕಿಯಾಗಿ ಜೋಡಿಯಾಗಿದ್ದು, ಉಳಿದಂತೆ ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಟಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ರವಿ ಬಸ್ರೂರು ಹಿನ್ನೆಲೆ ಸಂಗೀತವಿರುವ “ಕ್ಷೇತ್ರಪತಿ’ ಸಿನಿಮಾಕ್ಕೆ ವೈವಿಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನವಿದೆ.