ಮಂಗಳೂರು (ದಕ್ಷಿಣ ಕನ್ನಡ): ನವೋದಯ ಗ್ರಾಮಾ ಚಾರಿಟೆಬಲ್ ಟ್ರಸ್ಟ್ ನ ನವೋದಯ ಸ್ವ-ಸಹಾಯ ಗುಂಪುಗಳ ಸಂಭ್ರಮ ಮೇ 10ರಂದು ಬೆಳಗ್ಗೆ 10ಕ್ಕೆ ಗೋಲ್ಡ್ ಫಿಂಚ್ ಸಿಟಿ ಬಂಗ್ರ ಕೂಳೂರಿನಲ್ಲಿ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅಧ್ಯಕ್ಷ ಎಂ. ಎನ್. ರಾಜೇಂದ್ರ ಕುಮಾರ್ ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಸರಕಾರದ ಮುಖ್ಯ ಮಂತ್ರಿ ದೇವೇಂದ್ರ ಫಡ್ನವೀಸ್ ನವೋದಯ ಸ್ವ ಸಹಾಯ ಗುಂಪುಗಳ ಸದಸ್ಯರಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ ಅಂದ್ರು. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ “ಸಂತೃಪ್ತಿ” ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಸಹಕಾರಿ ಧ್ವಜಾರೋಹಣ ನಡೆಸಲಿದ್ದಾರೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹು ದಾದ ಇಂಧನ ಖಾತೆಯ ಸಚಿವ ಪ್ರಹ್ಲಾದ್ ವಿ ಜೋಶಿ,ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚ್ಯಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಡಿ.ವೀರೇಂದ್ರ ಹೆಗ್ಗಡೆ, ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಅಂದರು.