ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರ ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ನಕ್ಸಲ್ ಮಹೇಶ್ ರನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇರಳದ ತ್ರಿಶೂರ್ ಜೈಲಿನಲ್ಲಿ ಬಂಧನದಲ್ಲಿದ್ದ ಮಹೇಶ್ ರನ್ನು ಕೇರಳ ಪೊಲೀಸರು ಬಿಗಿ ಭದ್ರತೆಯೊಂದಿಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದರು. ಮೋಸ್ಟ್ ವಾಂಟೆಡ್ ನಕ್ಸಲ್ ಆಗಿದ್ದ ಮಹೇಶ್ ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ಕುಡುಡಿ ಮುಖ್ಯರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ನಿವಾಸಿ. ಇವರು ಮಹೇಶ್ ಅಲಿಯಾಸ್ ಜಯಣ್ಣ ಅಲಿಯಾಸ್ ಜಾನ್ ಅಲಿಯಾಸ್ ಮಾರಪ್ಪ ಎಂಬ ಹೆಸರಿನಿಂದಲೂ ಪರಿಚಿತರಾಗಿದ್ದಾರೆ.
ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012ರಲ್ಲಿ ನಕ್ಸಲ್ ಪರವಾದ ಕರಪತ್ರಗಳನ್ನು ಹಂಚಿದ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಳೆದ ಆರು ತಿಂಗಳಿಂದ ಅವರು ಕೇರಳದ ಜೈಲಿನಲ್ಲಿ ಬಂಧನದಲ್ಲಿದ್ದಾರೆ. ಕರ್ನಾಟಕದ ನಕ್ಸಲ್ ಮುಖಂಡರೊಂದಿಗೆ ಮಹೇಶ್ ಕೂಡ ರಾಜ್ಯದ ಮುಖ್ಯಮಂತ್ರಿಗಳ ಮುಂದೆ ಶರಣಾಗತಿಯಾಗಿದ್ದರು.



