Friday, April 4, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು

ಚಿಕ್ಕಮಗಳೂರು: 6 ಮಂದಿ ನಕ್ಸಲರು ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಲಿದ್ದಾರೆ.

ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ ಮತ್ತು ಕೇರಳದ ಟಿಎನ್ ಜೀಶಾ ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಲಿದ್ದಾರೆ.

ನಿಗದಿ ಪ್ರಕಾರ ಇಂದು ಬೆಳಗ್ಗೆ 10 ಗಂಟೆಗೆ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಬೇಕಿತ್ತು. ಆದರೆ ಕೊನೆ ಕ್ಷಣದ ಬದಲಾವಣೆ ಎಂಬಂತೆ ಇಂದು ಬೆಂಗಳೂರಿನಲ್ಲಿ ಸಿಎಂ ಮುಂದೆ ಶರಣಾಗಲಿದ್ದಾರೆ. ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಲಿದೆ.

ನಕ್ಸಲರು ಮತ್ತು ಅವರ ಕುಟುಂಬ ಸದಸ್ಯರು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಈಗ ತೆರಳುತ್ತಿದ್ದಾರೆ. ಹೋರಾಟಗಾರರು, ಸಂಬಂಧಿಕರು, ಮಾಜಿ ನಕ್ಸಲರು, ಸಮಿತಿ ಸದಸ್ಯರೂ ಬೆಂಗಳೂರಿನತ್ತ ತೆರಳುತ್ತಿದ್ದಾರೆ.

RELATED ARTICLES
- Advertisment -
Google search engine

Most Popular