Thursday, April 17, 2025
Google search engine

Homeಅಪರಾಧಎನ್‍ಸಿಬಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಎನ್‍ಸಿಬಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಬೆಂಗಳೂರು: ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಆಂಧ್ರ ಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಎನ್‍ಸಿಬಿ ಅಧಿಕಾರಿಗಳಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ವನಮಾರಪ್ಪನಹಳ್ಳಿ ಚೆಕ್‍ಪೋಸ್ಟ್ ಬಳಿ ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್‍ನನ್ನು ಬಂಧಿಸಿ ಎನ್‍ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular