ಕೆ.ಆರ್.ನಗರ: ಕಲುಷಿತ ನೀರು ಸೇವನೆಯಿಂದ ಅನೇಕ ಅವಘಡಗಳು ಮತ್ತು ಸಾವು ಸಂಭಿಸುತ್ತಿರುವುದರಿoದ ಶುದ್ದ ಕುಡಿಯುವ ನೀರು ಸರಬರಾಜು ಮಾಡಬೇಕಾಗಿದೆ ಅದಕ್ಕಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಇಲಾಖೆಯ ವತಿಯಿಂದ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ರಾಜಾರಾಮ್‌ವೈಲಾಯ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೀಲ್ಡ್ ಟೆಸ್ಟ್ ಕಿಟ್ ಮುಖಾಂತರ ನೀರು ಪರೀಕ್ಷಾ ವಿಧಾನಗಳ ಬಗ್ಗೆ ನಡೆದ ಅರಿವು ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನತೆಗೆ ಶುದ್ದ ಕುಡಿಯುವ ನೀರು ಸರಬರಾಜು ಮಾಡಬೇಕಾದ್ದದ್ದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು ಗ್ರಾಮೀಣ ಜನತೆಗೂ ಶುದ್ದ ನೀರು ನೀಡುವ ದೃಷ್ಠಿಯಿಂದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದ ೩೪ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೂ ತರಬೇತಿ ನೀಡಲಾಗಿದ್ದು ಜನತೆಗೆ ಕುಡಿಯಲು ಶುದ್ದ ನೀರನ್ನು ನೀಡಬೇಕಾಗಿದೆ ಅದಕ್ಕಾಗಿ ಇಲಾಖೆಯ ವತಿಯಿಂದ ನೀಡಲಾದ ಮಾಹಿತಿಯನ್ನು ಪಡೆದು ಓವರ್ ಹೆಡ್ ಟ್ಯಾಂಕ್‌ಗಳನ್ನು ಶುದ್ದಿಕರಿಸಬೇಕು ಇದರ ಜತೆಗೆ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಆನಂತರ ಸರಬರಾಜು ಮಾಡಬೇಕೆಂದು ಸಲಹೆ ನೀಡಿದರು.
ಡ್ಯೆಂಗ್ಯೂ ಸೇರಿದಂತೆ ಹಲವು ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಕಾಪಾಡಬೇಕಾಗಿದೆ ಈ ಬಗ್ಗೆ ಅಭಿವೃದ್ದಿ ಅಧಿಕಾರಿಗಳು ಗಮನ ಹರಿಸಿ, ಸ್ಥಳೀಯ ಚುನಾಯಿತ ಸದಸ್ಯರ ಸಹಕಾರ ಪಡೆದು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕೆ.ಆರ್.ನಗರ ತಾ.ಪಂ. ಇಒ ಜಿ.ಕೆ.ಹರೀಶ್, ಪಿರಿಯಾಪಟ್ಟಣ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸುನೀಲ್, ಪಿರಿಯಾಪಟ್ಟಣ ಕುಡಿಯುವ ನೀರು ಎಇಇ ಕೃಷ್ಣಮೂರ್ತಿ ಮಾತನಾಡಿ ಕೆ.ಆರ್.ನಗರ ಮತ್ತು ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಮೂರು ದಿನಗಳ ಕಾಲ ಕುಡಿಯುವ ನೀರಿಗೆ ಸಂಬoಧಿಸಿದoತೆ ಮಾಹಿತಿ ಮತ್ತು ತರಬೇತಿಯನ್ನು ನುರಿತ ತಜ್ಞರಿಂದ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದರು.