ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಹುಬ್ಬಳ್ಳಿಯ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದ ವೀರಶೈವ ಲಿಂಗಾಯತ ಮಹಿಳಾ ವೇದಿಕೆಯ ಪದಾಧಿಕಾರಿಗಳು ಹಾಗೂ ವಿವಿದ ಸಮಾಜದ ಮುಖಂಡರು ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಕರಣ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪಟ್ಟಣದ ಬಸವೇಶ್ವರ ಬಡಾವಣೆಯ ಬಸವೇಶ್ವರ ವೃತ್ತದಲ್ಲಿರುವ ಜಮಾಯಿಸಿದ ಪ್ರತಿಭಟನಗಾರರು ಕೊಲೆಗಡುಕನ ಭಾವಚಿತ್ರಕ್ಕೆ ಬೆಂಕಿ ಹಚ್ಚ ಆಕ್ರೋಶ ಹೊರಹಾಕಿದರು.
ವೀರಶೈವ ಲಿಂಗಾಯು ಮಹಿಳಾ ವೇದಿಕೆಯ ಅಧ್ಯಕ್ಷೆ ರೇಖಾ ರವೀಂದ್ರ ಮಾತನಾಡಿ ಶಾಲೆ-ಕಾಲೇಜುಗಳು ಜ್ಞಾನದ ದೇಗುಲಗಳು, ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ. ಇದರಿಂದ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ ಎಂದರು.
ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೀರಶೈವ ಸಮಾಜದ ಮುಖಂಡ ರುದ್ರೇಶ್ ಮಾತನಾಡಿ
ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ
ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ.
ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಗಲ್ಲು ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ-ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಯಲು ಪ್ರಯತ್ನಿಸ ಬೇಕೆಂದರು.
ವೀರಶೈವ ಲಿಂಗಾಯು ಮಹಿಳಾ ಘಟಕದ ಅಧ್ಯಕ್ಷೆ ರೇಖಾ ರವೀಂದ್ರ, ಜಿಲ್ಲಾ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೇತ್ರಾವತಿ, ವೀರಶೈವ ಸಮಾಜದ ಮಹಿಳಾ ವೇದಿಕೆಯ ಮೋಹನ್ ಕುಮಾರಿ, ರೂಪ ಸತೀಶ್, ಗೀತಾ, ರತ್ನಮ್ಮ, ಭಾಗ್ಯಮ್ಮ, ದಾಕ್ಷಾಯಿಣಿ ಮಂಗಳಾನಾಗೇಂದ್ರ ಮನೋಹರಿ ನಾಗರಾಜ್, ಸರ್ವಮಂಗಳ, ಚೇತನ್, ಲಾಲನಹಳ್ಳಿ ಮಹೇಶ್, ಪರಸಭಾ ಸದಸ್ಯೆ ಮಂಜುಳಾ ಚಿಕ್ಮವೀರು, ಪುರಸಭಾ ನಾಮಕರಣ ಮಾಜಿ ಸದಸ್ತರಾದ ಜಿ.ಪಿ.ಮಂಜು, ನಂಜುಂಡ, ಉಮಾಶಂಕರ, ತಾ.ಬಿಜೆಪಿ ಮಾಜಿ ಅಧ್ಯಕ್ಷ ಕೆ.ವೈ.ಮಂಜು, ವಕೀಲ ಕರುಣಾಕರ್ ಸೇರಿದಂತೆ ಅನೇಕರು ಇದ್ದರು.