ಬೆಂಗಳೂರು: ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಆದರೆ, ರಾಜ್ಯಪಾಲರು, ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇ ಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ ಎಂದರು.
೩೫ ವರ್ಷದಿಂದ ರಾಜಕೀ ಯದಲ್ಲಿದ್ದೇನೆ. ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ ಎಂದರು.