Tuesday, April 22, 2025
Google search engine

HomeUncategorizedರಾಷ್ಟ್ರೀಯನವದೆಹಲಿ: ಮೆಟ್ರೋ ನಿಲ್ದಾಣದ ಭಾಗ ಕುಸಿದು ನಾಲ್ವರ ಸ್ಥಿತಿ ಗಂಭೀರ

ನವದೆಹಲಿ: ಮೆಟ್ರೋ ನಿಲ್ದಾಣದ ಭಾಗ ಕುಸಿದು ನಾಲ್ವರ ಸ್ಥಿತಿ ಗಂಭೀರ

ನವದೆಹಲಿ: ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ಕೂಡಲೇ ಆತನನ್ನು ರಕ್ಷಣೆ ಮಾಡಿ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಇತರ ಮೂವರಿಗೆ ಗಾಯಗಳಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಕಾನೂನು ಸೆಕ್ಷನ್‌ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳದಲ್ಲಿದ್ದು, ಕ್ರೇನ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular