ಮಂಗಳೂರು (ದಕ್ಷಿಣ ಕನ್ನಡ): ಪಡೀಲ್‌ನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣವನ್ನು ಮೇ 16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.
ಇದೇ ಸಂದರ್ಭ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪೋಡಿ ಮುಕ್ತ ಅಭಿಯಾನದಡಿ 7,000 ಫಲಾನುಭವಿಗಳಿಗೆ ಆರ್‌ಟಿಸಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ದಾಖಲೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲೆಗೆ ಸುಂದರ ಹಾಗೂ ಸುಸಜ್ಜಿತ ಜಿಲ್ಲಾ ಕಚೇರಿ ನಿರ್ಮಾಣವಾಗಿರುವುದು ಸಂತಸ ನೀಡಿದೆ ಎಂದರು.