Friday, May 8, 2026
Google search engine

Homeದೇಶಅಸ್ಸಾಂನಲ್ಲಿ ಮೇ 12ರಂದು ನೂತನ ಸರ್ಕಾರ ಅಧಿಕಾರಕ್ಕೆ : ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

ಅಸ್ಸಾಂನಲ್ಲಿ ಮೇ 12ರಂದು ನೂತನ ಸರ್ಕಾರ ಅಧಿಕಾರಕ್ಕೆ : ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ

ಅಸ್ಸಾಂ : ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮೇ 12ರಂದು ಗುವಾಹಟಿಯ ಖಾನಾಪಾರದಲ್ಲಿ ನಡೆಯಲಿದೆ ಎಂದು ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಗುರುವಾರ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್‌ಡಿಎ ಮೈತ್ರಿಕೂಟದ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದಿಲೀಪ್ ಸೈಕಿಯಾ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಬೆಳಗ್ಗೆ 11 ಗಂಟೆಗೆ ಖಾನಾಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪ್ರಾರಂಭವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸುಮಾರು ಒಂದು ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 12ರಂದು ಬೆಳಗ್ಗೆ 10:15ಕ್ಕೆ ಗುವಾಹಟಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲಿದ್ದಾರೆ.

ಈ ಸಮಾರಂಭದಲ್ಲಿ ಪ್ರಧಾನಿ ಮತ್ತು ಗೃಹ ಸಚಿವರಲ್ಲದೆ ಬಿಜೆಪಿ ನಾಯಕ ಜೆ.ಪಿ. ನಡ್ಡಾ,ಹಲವು ಕೇಂದ್ರ ಸಚಿವರು, ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು, ದೇಶಾದ್ಯಂತದ ಹಿರಿಯ ಬಿಜೆಪಿ ನಾಯಕರುಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಯಶಸ್ಸಿಗಾಗಿ ರಾಜ್ಯ ಸರ್ಕಾರ ಮತ್ತು ಪಕ್ಷದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶಿಸ್ತು ಕಾಪಾಡಲು ಸಚಿವರು ಮತ್ತು ಹಿರಿಯ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಲಾಗಿದೆ.

ಮೇ 10ರಂದು ಬಿಜೆಪಿ ಶಾಸಕಾಂಗ ಪಕ್ಷ ಮತ್ತು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಗಳು ನಡೆಯಲಿವೆ. ಈ ಸಭೆಯಲ್ಲಿ ಜೆ.ಪಿ. ನಡ್ಡಾ ಮತ್ತು ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಹೊಸ ಸರ್ಕಾರದ ನೇತೃತ್ವ ವಹಿಸಲಿರುವ ಶಾಸಕಾಂಗ ಪಕ್ಷದ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular