Friday, April 11, 2025
Google search engine

HomeUncategorizedರಾಷ್ಟ್ರೀಯಹೊಸ ಕಾನೂನುಗಳು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ‘ಬುಲ್ಡೋಜರ್ ನ್ಯಾಯ’: ಮಲ್ಲಿಕಾರ್ಜುನ ಖರ್ಗೆ ಟೀಕೆ

ಹೊಸ ಕಾನೂನುಗಳು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ‘ಬುಲ್ಡೋಜರ್ ನ್ಯಾಯ’: ಮಲ್ಲಿಕಾರ್ಜುನ ಖರ್ಗೆ ಟೀಕೆ

ನವದೆಹಲಿ: ದೇಶಾದ್ಯಂತ ಕಾಲಮಿತಿಯೊಳಗೆ ತನಿಖೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶಾಸನಗಳ ಮೂಲಕ ಡಿಜಿಟಲ್ ದಾಖಲೆಗಳನ್ನು ಪ್ರಾಥಮಿಕ ಪುರಾವೆಗಳಾಗಿಸುವಲ್ಲಿ ಪ್ರಮುಖ ಬದಲಾವಣೆ ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳು ಜುಲೈ 1 ರಿಂದ ದೇಶದಲ್ಲಿ ಜಾರಿ ಆಗಿವೆ. ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಒತ್ತಾಯಪೂರ್ವಕವಾಗಿ ಈ ಮೂರು ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಗಿದೆ. ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ. 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳು ಜಾರಿಗೆ ಬಂದಿವೆ.

ಈ ಕುರಿತಂತೆ ಹಿಂದಿ ಭಾಷೆಯಲ್ಲಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ’ ಎಂದು ಹೇಳಿದ್ದಾರೆ.

‘ಸಂಸದೀಯ ವ್ಯವಸ್ಥೆಯಲ್ಲಿ ಈ ‘ಬುಲ್ಡೋಜರ್ ನ್ಯಾಯ’ ಮೇಲುಗೈ ಸಾಧಿಸಲು ‘ಇಂಡಿಯಾ’ ಬಣ ಬಿಡುವುದಿಲ್ಲ’ಎಂದು ಅವರು ಪ್ರತಿಪಾದಿಸಿದ್ದಾರೆ.

RELATED ARTICLES
- Advertisment -
Google search engine

Most Popular