Friday, April 18, 2025
Google search engine

Homeರಾಜ್ಯಹೊಸ ವರ್ಷಾಚರಣೆಗೆ ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ಹೊಸ ನಿಯಮ

ಹೊಸ ವರ್ಷಾಚರಣೆಗೆ ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ಹೊಸ ನಿಯಮ

ಬೆಂಗಳೂರು: 2024ಕ್ಕೆ ಗುಡ್ ಬೈ ಹೇಳಲು ಕೌಂಟ್ ಡೌನ್ ಶುರುವಾಗಿದೆ. ಬೆಂಗಳೂರು ಜನರು 2025 ಹೊಸ ವರ್ಷವನ್ನು ಸ್ವಾಗತಿಸಲು ಕಾತುರರಾಗಿದ್ದಾರೆ. ಇತ್ತ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಪ್ಲಾನ್ ನಡೆಸಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.

ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ನಿಯಮಗಳನ್ನು ಜಾರಿ ಮಾಡಲು ತಯಾರಿ ನಡೆದಿದೆ.

  • ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
  • ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್​ಗಳು ಬಂದ್.
  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
  • ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
  • ಆಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
  • ಬಾರ್, ಪಬ್​ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್​ಗೆ ಸೂಚನೆ.
  • ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
  • ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.

ನಗರದಲ್ಲಿನ ಕಸ ವಿಲೇವಾರಿ ಮಾಡುವುದು. ಬ್ಯಾರಿಕೇಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಸೂಚಿಸಿದ ಜಾಗದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವುದು. ಇನ್ನು, ಹೊಸ ವರ್ಷಾಚರಣೆಗೆ ಬಂದ ಜನರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೇ, ಆರೋಗ್ಯ ತಪಾಸಣೆಗೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ಬಾರಿ ಹೊಸವರ್ಷ ಅಚರಣೆಗೆ ಯಾವುದೇ ಅಡೆತಡೆ ಆಗದಂತೆ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ.

RELATED ARTICLES
- Advertisment -
Google search engine

Most Popular