ನವದೆಹಲಿ: ಹಳೆ ವರುಷ ಹೋಗಿ ಹೊಸ ವರುಷ ಬಂದಿದೆ, ಹೊಸ ವರುಷದ ಜೊತೆಗೆ ದೇಶದ ಜನರಲ್ಲಿ ಹೊಸ ಹುರುಪನ್ನು ತರಲೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಶುಭಾಶಗಳನ್ನು ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು 2024 ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಹಾರೈಸಿದ್ದಾರೆ.
ಕುರಿತು ಟ್ವಿಟರ್ ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಅವರು ಹೊಸ ವರ್ಷ ಆರಂಭವಾಗಿದೆ, ಈ ವರ್ಷ ಎಲ್ಲರಿಗೂ ಆಯುರಾರೋಗ್ಯ, ಶಾಂತಿ, ಸಮೃದ್ಧಿ ತರಲಿ ಎಂದು ಹಾರೈಸಿದ್ದಾರೆ.
ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದೇಶದ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಹೇಳಿದ್ದಾರೆ, ಹೊಸ ವರ್ಷದಲ್ಲಿ ಸಮೃದ್ಧ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಿ ಎಂದು ಶುಭ ಹಾರೈಸಿದ್ದಾರೆ.
ಹೊಸ ವರ್ಷಕ್ಕೆ ದೇಶದ ಹಲವು ನಾಯಕರು ಶುಭ ಹಾರೈಸಿದ್ದಾರೆ. ರಾಹುಲ್ ಗಾಂಧಿ ಎಕ್ಸ್ ನಲ್ಲಿ ಶುಭ ಹಾರೈಸಿದ್ದು, ‘ಹೊಸ ವರ್ಷವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಎಂದು ಹೇಳಿಕೊಂಡಿದ್ದಾರೆ.
ಅದೇ ರೀತಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಶುಭ ಹಾರೈಸಿದ್ದು, ‘ಈ ಹೊಸ ಅಧ್ಯಾಯಕ್ಕೆ ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ. 2024 ರ ವರ್ಷವು ಮತ್ತೊಮ್ಮೆ ಬಡ ಮತ್ತು ಅಂಚಿನಲ್ಲಿರುವ ಜನರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡುವ ವರ್ಷವಾಗಬೇಕು. ಪ್ರತಿಯೊಬ್ಬ ನಾಗರಿಕನ ಹಕ್ಕುಗಳಿಗಾಗಿ ನಾವು ಒಗ್ಗಟ್ಟಿನಿಂದ ಹೋರಾಡುವುದು ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಪವಿತ್ರ ಕರ್ತವ್ಯ. ಮತ್ತೊಮ್ಮೆ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಹೇಳಿಕೊಂಡಿದ್ದಾರೆ.