Friday, April 11, 2025
Google search engine

Homeರಾಜ್ಯಅಪಹರಣವಾದ 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ನವಜಾತ ಶಿಶು

ಅಪಹರಣವಾದ 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ನವಜಾತ ಶಿಶು

ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ ೩೬ ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ ೫೦,೦೦೦ಕ್ಕೆ ಮಾರಾಟ ಮಾಡಿದ್ದ ಮೂವರು ಕಳ್ಳಿಯರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ಬಂಧಿತರು. ಬಂಧಿತರು ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಮಗುವನ್ನು ಅಪಹರಿಸಿದ್ದರು. ಮೂವರು ಕಳ್ಳಿಯರ ತಂಡ ನವಜಾತ ಶಿಶುವನ್ನು ಮಾರಾಟ ಮಾಡಲೆಂದು ಅಪಹರಿಸಿತ್ತು. ಬಳಿಕ ಮಗುವನ್ನು ಖೈರುನ್ ಎಂಬ ಮಹಿಳೆಗೆ ೫೦ ಸಾವಿರ ರೂ.ಗೆ ಮಾರಾಟ ಕೂಡ ಮಾಡಿತ್ತು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಕೂಡಲೇ, ಮಗುವನ್ನು ರಕ್ಷಿಸಿ, ಕಳ್ಳಿಯರನ್ನ ಬಂಧಿಸಿದ್ದಾರೆ. ಇನ್ನು ಮಗು ಖರೀದಿಸಿದ ಆರೋಪಿ ಖೈರುನ್ ಪರಾರಿಯಾಗಿದ್ದಾಳೆ. ಆಕೆಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular