ಗುಂಡ್ಲುಪೇಟೆ : ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿದ್ದು, ಚಿರತೆ ಸೆರೆಯಿಂದ ಆತಂಕದಲ್ಲಿದ್ದ ರೈತರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ರಂಗನಾಥಪುರ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಚಿರತೆ ಕಾಣಿಸಿಕೊಂಡು ರೈತರಲ್ಲಿ ಭೀತಿ ಮೂಡಿಸಿತ್ತು. ಜಮೀನುಗಳಿಗೆ ತೆರಳಲು ಹಾಗೂ ಜಾನುವಾರುಗಳನ್ನು ಮೇಯಿಸಲು ರೈತರು ಆತಂಕ ಪಡುವಂತಾಗಿತ್ತು.

ಈ ಹಿನ್ನೆಲೆಯಲ್ಲಿ ರೈತರು ಅರಣ್ಯ ಇಲಾಖೆಗೆ ಚಿರತೆ ಸೆರೆಹಿಡಿಯುವಂತೆ ಮನವಿ ಮಾಡಿದ್ದರು. ರೈತರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯ ಚಲನವಲನ ಗಮನಿಸಿ ಬೋನು ಇರಿಸಿದ್ದರು. ಇದೀಗ ಬೋನಿಗೆ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರು ಹಾಗೂ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಸೆರೆಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯ ಕೈಗೊಂಡರು.