ಮೈಸೂರು:  ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಮುಖಂಡತ್ವದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂದೇಶ ನೀಡಿದರು.ಅವರಿಂದು ಮಾಜಿ ಮುಖ್ಯಮಂತ್ರಿ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಎಂ. ವೀರಪ್ಪ ಮೊಯಿಲಿ ಅವರ 'ವಿಶ್ವಸಂಸ್ಕೃತಿಯ ಮಹಾಯಾನ' (ಸಂಪುಟ 4) - ಗದ್ಯ ಮಹಾಕಾವ್ಯವನ್ನು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ   ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕಲೆ, ಸಂಸ್ಕೃತಿಯನ್ನು ಉಳಿಸುತ್ತಿರುವ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಮುಂದಿನ ವರ್ಷ ಅವರ  ಮುಖಂಡತ್ವದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಬೇಕು ಎಂದು ಸರ್ಕಾರ ತೀರ್ಮಾನ ಮಾಡುತ್ತಿದೆ. ಸಾಹಿತ್ಯ, ಧರ್ಮ, ಸಂಸ್ಕೃತಿಯನ್ನು ಕಾಪಾಡುವ ಕೆಲಸ ಎಲ್ಲ ರಾಜಕಾರಣಿಗಳಿಂದ ಸಾಧ್ಯವಿಲ್ಲ. ನನ್ನಂತಹವನಿಗೆ ಟೈಮೇ ಇಲ್ಲ. ಇಂತಹ ಸಂದರ್ಭದಲ್ಲಿಯೂ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಮುಖಂಡತ್ವದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು, ಆ ಕುರಿತು ಬಜೆಟ್‌ ನಲ್ಲಿ ವಿಷಯವನ್ನಿಡುತ್ತೇನೆ. ಸಾಹಿತ್ಯ ರಾಜಕಾರಣದ ನಂಟು ಹೊಸದೇನು ಅಲ್ಲ, ಸಂಸ್ಕೃತಿಯ ಗುರುತು, ಮಾನವೀಯತೆಯೇ ನಮ್ಮ ಅಸ್ತಿತ್ವ.ನಮ್ಮೆಲ್ಲರ ಭಾವನೆಗಳೂ ಒಂದೇ. ಸಾಹಿತ್ಯ ಯಾವತ್ತೂ ಮನಸ್ಸಿನಲ್ಲಿ ಉಳಿಯುತ್ತದೆ ಎನ್ನುವುದಕ್ಕೆ ಇವೆಲ್ಲ ಸಾಕ್ಷಿ ಎಂದರು.ಈ ಸಂದರ್ಭದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಮಾಜಿ ಮುಖ್ಯಮಂತ್ರಿಗಳಾದ ಡಾ. ಎಂ. ವೀರಪ್ಪ ಮೊಯಿಲಿ, ನಿಕಟಪೂರ್ವ ಮುಖ್ಯಮಂತ್ರಿ   ಸಿದ್ದರಾಮಯ್ಯ, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ   ಎಚ್.ಎಂ. ರೇವಣ್ಣ, ನನ್ನ ರಾಜಕೀಯ ಕಾರ್ಯದರ್ಶಿ   ಎ.ಎಸ್.‌ ಪೊನ್ನಣ್ಣ, ಶಾಸಕರು, ಜನಪ್ರತಿನಿಧಿಗಳು ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.