ಬೆಂಗಳೂರು : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌   ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 15 ತಿಂಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದು,   ತಮಗೆ ಮತ್ತೆ ಬೆನ್ನು ನೋವು ಶುರುವಾಗಿದೆ.ಅಗತ್ಯ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಬೇಕೆಂದು ನ್ಯಾಯಾಲಯದ ಬಳಿ ಮನವಿ ಸಲ್ಲಿಸಿದ್ದರು. ಕಳೆದ ಮೂರು ದಿನಗಳಿಂದಲೂ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಈ ಬಗ್ಗೆ ವಿಚಾರಣೆ ನಡೆದಿದ್ದು, ಇಂದು (ನ.7) ಅರ್ಜಿಯ ಕುರಿತು ಆದೇಶ ಹೊರಡಿಸಿದೆ, ನಟ ದರ್ಶನ್​​ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೆಲ ಷರತ್ತುಗಳ ಅನ್ವಯ ಅವಕಾಶ ಮಾಡಿಕೊಡಲಾಗಿದೆ.ದರ್ಶನ್ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿಯನ್ನು ನೀಡಲಾಗಿದೆ. ಫಿಸಿಯೋಥೆರಪಿ ಹಾಗೂ ಬೆನ್ನು ನೋವಿಗೆ ಸಂಬಂಧಿಸಿದ ಇತರೆ ಚಿಕಿತ್ಸೆಗಳನ್ನು ಸಹ ದರ್ಶನ್ ಅವರು ಜೈಲಿನ ಆವರಣದಲ್ಲಿಯೇ ಪಡೆಯಬಹುದಾಗಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜೈಲಧಿಕಾರಿಗಳಿಗೆ ಸೂಚನೆ ನೀಡಿದೆ.ಎಸ್​​ಪಿಪಿ ಅವರು, ದರ್ಶನ್​​ಗೆ ಕಳೆದ ಬಾರಿ ಬೆನ್ನು ನೋವು ಬಂದಾಗ ನಡೆದಿದ್ದನ್ನು ವಿವರಿಸಿ, ‘ಕಳೆದ ಬಾರಿ ಇವರು ಬೆನ್ನು ನೋವಿನ ಕಾರಣ ನೀಡಿ ಜಾಮೀನು ಪಡೆದಿದ್ದರು. ಆದರೆ ಆಗ ಚಿಕಿತ್ಸೆ ಪಡೆಯುವ ಬದಲಿಗೆ ಕಾರ್ಯಕ್ರಮಗಳಲ್ಲಿ ಭಾಗಿ ಆದರು, ಸಿನಿಮಾ ಚಿತ್ರೀಕರಣಗಳಲ್ಲಿ ಭಾಗಿ ಆದರು. ಅದನ್ನು ಗಮನದಲ್ಲಿಟ್ಟುಕೊಂಡು ಆದೇಶ ನೀಡಬೇಕು’ ಎಂದಿದ್ದರು. ಅದರಂತೆ ಈಗ ದರ್ಶನ್ ಅವರಿಗೆ ಜೈಲಿನಲ್ಲೇ ಚಿಕಿತ್ಸೆ ನೀಡುವಂತೆ ನ್ಯಾಯಾಲಯದ ಆದೇಶಿಸಿದೆ.