ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ ʼಸಿನಿ ಸಂವಾದ - 2026ʼರ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಂಸದ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.  ಈ ಸಂದರ್ಭ ಮಾತನಾಡಿದ ಅವರು  ಕನ್ನಡ ಚಿತ್ರರಂಗದ ಇತಿಹಾಸ ಮತ್ತು ಪರಂಪರೆಯನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವ ಅಕಾಡೆಮಿಯ ಮಹತ್ವಾಕಾಂಕ್ಷಿ ಯೋಜನೆ ‘ಸಿನಿಯಾನ’ ಕನ್ನಡ ಸಿನಿಮಾ ಆರ್ಕೈವ್ ವೆಬ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಲಾಯಿತು. ಚಿತ್ರರಂಗದ ಯುವ ಪ್ರತಿಭೆಗಳಿಗೆ ತಾಂತ್ರಿಕ ತರಬೇತಿ ನೀಡುವ ಮೂಲಕ ನಮ್ಮ ಸಿನಿಮಾ ಕ್ಷೇತ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಇಂತಹ ಪ್ರಯತ್ನಗಳು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ , ಚಿತ್ರರಂಗದ ಪ್ರಮುಖರಾದ  ಸಾ.ರಾ. ಗೋವಿಂದು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.