ʻಧರ್ಮನ್ʼ ಚಿತ್ರತಂಡ ಸೇರಿಕೊಂಡ ನಟಿ ಶ್ರೀಲೀಲಾ

ಬೆಂಗಳೂರು: ನಟಿ ಶ್ರೀಲೀಲಾ ಅವರು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಹಾಗೂ ಕಮಲ್ ಹಾಸನ್ ನಿರ್ಮಿಸುತ್ತಿರುವ ಬಹುನಿರೀಕ್ಷಿತ ʻಧರ್ಮನ್ʼ ಚಿತ್ರತಂಡಕ್ಕೆ ಪ್ರಮುಖ ಪಾತ್ರಕ್ಕಾಗಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವನ್ನು ಚಿತ್ರತಂಡ ಪ್ರಕಟಿಸಿದ್ದು, ಅಭಿಮಾನಿಗಳಲ್ಲಿ ಚಿತ್ರದ ಬಗೆಗಿನ ನಿರೀಕ್ಷೆ ದುಪ್ಪಟ್ಟಾಗಿದೆ.ರಾಜ್‌ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ಹಾಗೂ ಟರ್ಮರಿಕ್ ಮೀಡಿಯಾ ಬ್ಯಾನರ್‌ಗಳ ಅಡಿಯಲ್ಲಿ ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದು, ʻಓ ಮೈ ಕಡವುಳೆʼ ಖ್ಯಾತಿಯ ಅಶ್ವತ್ಥ್ ಮಾರಿಮುತ್ತು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದು, ಸಾಹಸ ದೃಶ್ಯಗಳಿಗಾಗಿ ಸಾಹಸ ನಿರ್ದೇಶಕರಾದ ಅನ್ಬರಿವ್ ಜೋಡಿ ಕೈಜೋಡಿಸಿದೆ. ಅತ್ಯುನ್ನತ ತಾಂತ್ರಿಕ ಗುಣಮಟ್ಟ ಮತ್ತು ಬಲಿಷ್ಠ ತಾರಾಗಣದೊಂದಿಗೆ ಸಿದ್ಧವಾಗುತ್ತಿರುವ ʻಧರ್ಮನ್ʼ ಸಿನಿಮಾ ಬೆಳ್ಳಿತೆರೆಯಲ್ಲಿ ಹೊಸದೊಂದು ಮ್ಯಾಜಿಕ್ ಸೃಷ್ಟಿಸುವ ಎಲ್ಲಾ ಲಕ್ಷಣಗಳನ್ನು ತೋರುತ್ತಿದೆ.
ಸಂಬಂಧಿತ ಸುದ್ದಿಗಳು

ಷರತ್ತುಗಳನ್ನು ಅನ್ವಯಿಸಿ ನಟ ದರ್ಶನ್ ಬೇಡಿಕೆಗೆ ಕೋರ್ಟ್ ಅಸ್ತು
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 15 ತಿಂಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲ…
◷ 07/11/2026
50ದಿನ ಪೂರೈಸಿದ ಅಮೆರಿಕಾ ಅಮೆರಿಕಾ2
ಬೆಂಗಳೂರು : ಹಿರಿಯ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ ‘ಅಮೆರಿಕಾ ಅಮೆರಿಕಾ 2’ 50 ದಿನ…
◷ 04/11/2026
ನವೆಂಬರ್ 5ರಂದು ‘ರಾಮಾಯಣ : ಭಾಗ 1’ ತೆರೆಗೆ
ಮುಂಗಡ ಟಿಕೆಟ್ ಬುಕಿಂಗ್ನಲ್ಲಿ ಭರ್ಜರಿ ಪ್ರತಿಕ್ರಿಯೆ
◷ 03/11/2026
ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರ ದಾರಿ ತಪ್ಪಿಸುತ್ತಿದೆ : ಪ್ರಿಯಾಂಕ್ ಖರ್ಗೆ ಆರೋಪ
ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುವ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಐಟಿ-ಬಿಟ…
◷ 07/11/2026
