ಹೆರಿಗೆ ವೇಳೆ ತಾಯಿ-ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿದ ಕುಟುಂಬಸ್ಥರು
ಕೆ.ಆರ್. ನಗರ ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ : ಸ್ಥಳಕ್ಕೆ ಶಾಸಕ ರವಿಶಂಕರ್ ಭೇಟಿ

ಮೈಸೂರು: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಹಾಗೂ ನವಜಾತ ಶಿಶು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಕೃಷ್ಣರಾಜನಗರದಲ್ಲಿ ನಡೆದಿದೆ.ಮಳಲಿ ಗ್ರಾಮದ ಮಹೇಶ್ ಅವರ ಪತ್ನಿ ಸುಶ್ಮಿತಾ ಮೃತ ದುರ್ದೈವಿ. ಹೆರಿಗೆಗೆಂದು ನಿನ್ನೆ ರಾತ್ರಿ ಕೃಷ್ಣರಾಜನಗರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಹೆರಿಗೆ ಮಾಡಿಸುವ ಸಮಯದಲ್ಲಿ ತಾಯಿ ಮತ್ತು ನವಜಾತ ಶಿಶು ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಕಣ್ಣೀರು ಹಾಕಿ ಕುಟುಂಬಸ್ಥರು ಆಕ್ರಂದಿಸಿದರಲ್ಲದೇ ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಆರ್.ನಗರ ಶಾಸಕ ಡಿ. ರವಿಶಂಕರ್ ಅವರು ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿದರು. ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಸಂಬಂಧಿತ ವಿಡಿಯೊ / Watch video
ಸಂಬಂಧಿತ ಸುದ್ದಿಗಳು

ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ
◷ 03/11/2026
ಯುವಕನ ಕತ್ತು ಸೀಳಿ ಹತ್ಯೆ
ಮಂಡ್ಯ : ಮಂಡ್ಯದ ಮದ್ದೂರು ಪಟ್ಟಣದ ಕೆಮ್ಮಣ್ಣು ನಾಲೆ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ಜಗಳ ಬಿಡಿಸಲು ಹೋದ ಯುವಕನೋರ್ವನ ಕತ್ತು ಸೀಳಿ …
◷ 03/11/2026
17 ಖೈದಿಗಳು ಜೈಲಿನಿಂದ ಎಸ್ಕೇಪ್ ಕೇಸ್: ಅಧಿಕಾರಿಗಳ ಅಮಾನತು, ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ!
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಿಂದ 17 ವಿಚಾರಣಾಧೀನ ಖೈದಿಗಳು ಪರಾರಿಯಾದ ಪ್ರಕರಣಕ್ಕೆ
◷ 01/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
