ಯುವಕನ ಕತ್ತು ಸೀಳಿ ಹತ್ಯೆ

ಮಂಡ್ಯ : ಮಂಡ್ಯದ ಮದ್ದೂರು ಪಟ್ಟಣದ ಕೆಮ್ಮಣ್ಣು ನಾಲೆ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ಜಗಳ ಬಿಡಿಸಲು ಹೋದ ಯುವಕನೋರ್ವನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾಗಿರುವ ಯುವಕನನ್ನು ಮದ್ದೂರು ಪಟ್ಟಣದ ನಂದನ್ (25) ಎಂದು ಹೇಳಲಾಗಿದೆ. ಹಣದ ವಿಚಾರಕ್ಕೆ ಸಂಬಂಧಿಸಿದ ಜಗಳ ಬಿಡಿಸಲು ಹೋದ ವೇಳೆ ಕೊಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡ ನಂದನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಹಾಗೂ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಬಂಧಿತ ಸುದ್ದಿಗಳು

ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ
◷ 03/11/2026
ಹೆರಿಗೆ ವೇಳೆ ತಾಯಿ-ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿದ ಕುಟುಂಬಸ್ಥರು
ಕೆ.ಆರ್. ನಗರ ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ : ಸ್ಥಳಕ್ಕೆ ಶಾಸಕ ರವಿಶಂಕರ್ ಭೇಟಿ
◷ 03/11/2026
17 ಖೈದಿಗಳು ಜೈಲಿನಿಂದ ಎಸ್ಕೇಪ್ ಕೇಸ್: ಅಧಿಕಾರಿಗಳ ಅಮಾನತು, ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ!
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಿಂದ 17 ವಿಚಾರಣಾಧೀನ ಖೈದಿಗಳು ಪರಾರಿಯಾದ ಪ್ರಕರಣಕ್ಕೆ
◷ 01/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
