ಬಳ್ಳೂರು ಟಿಪ್ಪರ್ ಅಪಘಾತ: ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಶಾಯನ್ ಚಿಕಿತ್ಸೆ ಫಲಿಸದೆ ಸಾವು
ಮೂವರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಅಕ್ಟೋಬರ್ 30ರಂದು ಟಿಪ್ಪರ್ ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಕಂಡ್ಲೂರು ನಿವಾಸಿ ಟಿ.ಕೆ. ಮೊಹಮ್ಮದ್ ಶಾಯನ್ (Mohammad Shayan) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಸ್ಕೂಟರ್‌ನ ಹಿಂಬದಿ ಸವಾರನಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಮೊಹಮ್ಮದ್ ರಾಯನ್ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳ್ಳೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ರಾಜ್ಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿತ್ತು. ಮಣ್ಣು ಸಾಗಿಸುತ್ತಿದ್ದ ಎರಡು ಟಿಪ್ಪರ್ ಲಾರಿಗಳು ಕುಂದಾಪುರ ಕಡೆಯಿಂದ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬರುತ್ತಿದ್ದವು ಎನ್ನಲಾಗಿದೆ. ಮುಂದೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದಾಗಿ ಮೊದಲ ಟಿಪ್ಪರ್ ಚಾಲಕ ವೇಗ ಕಡಿಮೆ ಮಾಡಿದ್ದಾನೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಟಿಪ್ಪರ್ ಮೊದಲ ಲಾರಿಗೆ ಡಿಕ್ಕಿ ಹೊಡೆದಿದೆ.
ನಂತರ ಎರಡನೇ ಟಿಪ್ಪರ್ ಚಾಲಕ ವಾಹನವನ್ನು ರಸ್ತೆಯ ಬಲಭಾಗಕ್ಕೆ ತಿರುಗಿಸಿದಾಗ ಕಂಡ್ಲೂರು ಕಡೆಯಿಂದ ಬಸೂರು ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದರು.
ಪೊಲೀಸರ ತನಿಖೆಯಲ್ಲಿ ಅಪಘಾತಕ್ಕೀಡಾದ ಟಿಪ್ಪರ್ ಅಗತ್ಯ ಪರವಾನಗಿ ಇಲ್ಲದೆ ಮಣ್ಣು ಸಾಗಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಹಾಗೂ ಅಕ್ರಮ ಮಣ್ಣು ಸಾಗಾಟಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಚಾಲಕರಾದ ನಾಗರಾಜ್ ಮತ್ತು ಋತ್ವಿಜ್ ಹಾಗೂ ಮಣ್ಣು ತೆಗೆದ ಸ್ಥಳದ ಮಾಲೀಕ ಅಜಿತ್ ಶೆಟ್ಟಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಯುವಕನ ಕತ್ತು ಸೀಳಿ ಹತ್ಯೆ
ಮಂಡ್ಯ : ಮಂಡ್ಯದ ಮದ್ದೂರು ಪಟ್ಟಣದ ಕೆಮ್ಮಣ್ಣು ನಾಲೆ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ಜಗಳ ಬಿಡಿಸಲು ಹೋದ ಯುವಕನೋರ್ವನ ಕತ್ತು ಸೀಳಿ …
◷ 03/11/2026
ಹೆರಿಗೆ ವೇಳೆ ತಾಯಿ-ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿದ ಕುಟುಂಬಸ್ಥರು
ಕೆ.ಆರ್. ನಗರ ಆಸ್ಪತ್ರೆ ಎದುರು ಕುಟುಂಬಸ್ಥರ ಆಕ್ರಂದನ : ಸ್ಥಳಕ್ಕೆ ಶಾಸಕ ರವಿಶಂಕರ್ ಭೇಟಿ
◷ 03/11/2026
17 ಖೈದಿಗಳು ಜೈಲಿನಿಂದ ಎಸ್ಕೇಪ್ ಕೇಸ್: ಅಧಿಕಾರಿಗಳ ಅಮಾನತು, ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ!
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಿಂದ 17 ವಿಚಾರಣಾಧೀನ ಖೈದಿಗಳು ಪರಾರಿಯಾದ ಪ್ರಕರಣಕ್ಕೆ
◷ 01/11/2026
ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟ…
◷ 03/11/2026
