ಬೀದರ್:‌ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಸೇರಿದಂತೆ ಸಚಿವ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಈಶ್ವರ್‌ ಖಂಡ್ರೆ ಸಭೆ ನಡೆಸಿ ಸಮಗ್ರವಾಗಿ ಪರಿಶೀಲನೆ ನಡೆಸಿದರು.ಜಿಲ್ಲೆಯ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ನೀರಿನ ಅಭಾವವಿರುವ ಗ್ರಾಮಗಳನ್ನು ಗುರುತಿಸಿ, ಟ್ಯಾಂಕರ್ ಮೂಲಕ ನೀರು ಪೂರೈಕೆ, ಕೊಳವೆಬಾವಿಗಳ ದುರಸ್ತಿ ಹಾಗೂ ಪರ್ಯಾಯ ನೀರಿನ ವ್ಯವಸ್ಥೆಗಳನ್ನು ತಕ್ಷಣ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ ಎಂದು ಸಚಿವರು ತಿಳಿಸಿದರು.ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಬರ ನಿರ್ವಹಣಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು.  ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಮೊದಲ ಆದ್ಯತೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಇದೇ ವೇಳೆ ತಿಳಿಸಿದರು.