ಭಕ್ತ ಕನಕದಾಸರ ಜಯಂತಿ : ಅಗತ್ಯ ಸಿದ್ದತೆಗೆ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೂಚನೆ

ಬಳ್ಳಾರಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ಕೇಂದ್ರದಲ್ಲಿ ನ. 27 ರಂದು ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಚರ್ಚಿಸಲು ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜಕ್ಕೆ ಕನಕದಾಸರು ನೀಡಿದ ಕೀರ್ತನೆಗಳು, ತತ್ವಪದಗಳು ಹಾಗೂ ಸಮಾನತೆಯ ಸಂದೇಶಗಳನ್ನು ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ನ. 27 ರಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಕಡ್ಡಾಯವಾಗಿ ಆಚರಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದರು.ಅಂದು ಬೆಳಗ್ಗೆ 9 ಗಂಟೆಗೆ ಕನಕದಾಸರ ವೃತ್ತದಲ್ಲಿರುವ ಸಂತ ಶ್ರೇಷ್ಠ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಮುಖಂಡರು ಸೇರಿದಂತೆ ಎಲ್ಲರೂ ಭಾಗವಹಿಸಬೇಕು. ಪುತ್ಥಳಿಯ ಸ್ವಚ್ಛತೆ, ಪೇಂಟಿಂಗ್, ಹೂವಿನ ಅಲಂಕಾರ ಹಾಗೂ ದೀಪಾಲಂಕಾರದ ವ್ಯವಸ್ಥೆಯನ್ನು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕು ಎಂದು ಸೂಚಿಸಿದರು.ಮಾಲಾರ್ಪಣೆ ಆದ ನಂತರ ಭಾವಚಿತ್ರದ ಮೆರವಣಿಗೆ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಆರಂಭವಾಗಲಿದೆ. ಮುನಿಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ಸಾಗಲಿದ್ದು, ಇಂದಿರಾ ವೃತ್ತ, ಗಡಗಿ ಚನ್ನಪ್ಪ ರಾಯಲ್ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ, ಜೈನ್ ಮಾರ್ಕೆಟ್, ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ರಂಗಮಂದಿರ ಹಾಗೂ ಮೆರವಣಿಗೆ ಮಾರ್ಗದಲ್ಲಿ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ತಿಳಿಸಿದರು.ಅಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಕ್ತ ಕನಕದಾಸರ ಗೀತ ಗಾಯನ ಇರಲಿದೆ. ಕನಕದಾಸರ ತತ್ವ, ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲು ನುರಿತ ಉಪನ್ಯಾಸಕರನ್ನು ನಿಯೋಜಿಸಬೇಕು ಎಂದರು.ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ನಗರದಲ್ಲಿ ಬ್ಯಾನರ್, ಡಿಜೆ ಧ್ವನಿ ವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಎಲ್ಲಾ ಮುಖಂಡರು, ಅಧಿಕಾರಿ- ಸಿಬ್ಬಂದಿ, ಶಾಲಾ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಸಂಬಂಧಿತ ಸುದ್ದಿಗಳು

FICCI ವಾರ್ಷಿಕ ಮಹಾಸಭೆ ಮತ್ತು ಸಮ್ಮೇಳನಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ನವದೆಹಲಿಯ 'ಭಾರತ ಮಂಟಪಂ'ನಲ್ಲಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕ…
◷ 19/11/2026
ಅರಸಾಳು (ಮಾಲ್ಗುಡಿ) ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
ಮೈಸೂರು : ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಅರಸಾಳು (ಮಾಲ್ಗುಡಿ) ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವವನ್ನು ಸಂಭ್ರಮದ…
◷ 18/11/2026
ಸಚಿವ ಡಾ.ಯತೀಂದ್ರ ನಾಲ್ವಡಿ ಕೃಷ್ಣರಾಜರ ಇತಿಹಾಸವನ್ನು ಓದಬೇಕು : ಮಾಜಿ ಸಚಿವ ಮುರುಗೇಶ್ ನಿರಾಣಿ ಸಲಹೆ
ಮೈಸೂರು: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಮಹಾರಾಜರ ಬಗ್ಗೆ ಮಾತನಾಡುತ್ತಾರೆ.ನನಗೆ ಪ್ರೇರಣೆಯೇ ನಾಲ್ವಡಿ ಕೃಷ್ಣರಾಜ ಒಡೆಯರ್…
◷ 18/11/2026
ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಹರ್ದೀಪ್ ಸಿಂಗ್ ಪುರಿ ಪ್ರಮಾಣವಚನ ಸ್ವೀಕಾರ
ನವದೆಹಲಿ : ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳವಾರ ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು…
◷ 17/11/2026
