ಬೆಂಗಳೂರು : ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯ ನಗರ ರೈಲ್ವೆ ಸಮಾನಾಂತರ ರಸ್ತೆಯಲ್ಲಿರುವ ಮೈಸೂರು ಲ್ಯಾಂಪ್ಸ್ ರೈಲ್ವೆ ಗೇಟ್ ಬಳಿ ರೈಲ್ವೆ ಕೆಳಸೇತುವೆ (RUB) ನಿರ್ಮಿಸುವ ಉದ್ದೇಶದಿಂದ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತರು ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾಜಿ ಡಿಸಿಎಂ ಡಾ.ಅಶ್ವತ್ಥ್‌ ನಾರಾಯಣ್ ಜಂಟಿ ಸ್ಥಳ ಪರಿಶೀಲನೆ ನಡೆಸಿ, ಯೋಜನೆಯ ಸಾಧ್ಯತೆಗಳು, ತಾಂತ್ರಿಕ ಅಂಶಗಳು ಹಾಗೂ ಅನುಷ್ಠಾನದ ಕುರಿತು ಸಮಗ್ರವಾಗಿ ಚರ್ಚಿಸಿದರು.ಈ ಸಂಬಂಧ ರೈಲ್ವೆ ಇಲಾಖೆಯ ಅಧಿಕಾರಿಗಳು ಮುಂದಿನ ಒಂದು ವಾರದೊಳಗೆ ಸ್ಥಳ ಸಮೀಕ್ಷೆ ನಡೆಸಿ, ಯೋಜನೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸುವ ನಕ್ಷೆ ಸಿದ್ಧಪಡಿಸಲಿದ್ದಾರೆ.ಈ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ರೈಲ್ವೆ ಗೇಟ್‌ನಿಂದ ಉಂಟಾಗುವ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ, ಸುಬ್ರಮಣ್ಯ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಸಹಕಾರಿಯಾಗಲಿದೆ.