ಬೆಂಗಳೂರು :  ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು  ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ.ಠಾಣೆಗಳಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಿಲ್ಲ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ಸರ್ಕಾರದ ಆದ್ಯತೆಯಾಗಿದ್ದು, ಡ್ರಗ್ಸ್ ದಂಧೆ ಹಾಗೂ ವಸೂಲಿಯಲ್ಲಿ ಭಾಗಿಯಾಗುವ ಪೊಲೀಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ರೌಡಿಗಳಲ್ಲಿ ಭಯ ಮೂಡಿಸಿ, ಸಂಪೂರ್ಣ ಮಟ್ಟಹಾಕಲು ಪ್ರತ್ಯೇಕ ರೌಡಿ ದಳ ರಚಿಸಲಾಗಿದೆ. ಇದಕ್ಕಾಗಿ ಎಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ಕಮಿಷನರೇಟ್ ಸ್ಥಾಪಿಸಲಾಗಿದೆ. ತಂತ್ರಜ್ಞಾನ ಬಳಸಿ ಸೈಬರ್ ಹಾಗೂ ಆರ್ಥಿಕ ಅಪರಾಧಗಳನ್ನು ಮಟ್ಟಹಾಕಬೇಕು. ಸುಳ್ಳು ಸುದ್ದಿ, ದ್ವೇಷ ಭಾಷಣದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು, ಜಾಲತಾಣಗಳ ಮೇಲೆ ನಿರಂತರ ನಿಗಾ ಇರಿಸಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.