ಬೆಂಗಳೂರು : ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಕಾಲ್ ಮೂಲಕ ಸಂವಾದ ನಡೆಸಿದ್ದಾರೆ.ಈ ವೇಳೆ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಅವರ ಬೇಡಿಕೆಗಳ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.ಸರ್ಕಾರವು ಆಶಾ ಕಾರ್ಯಕರ್ತೆಯರ ಪರವಾಗಿ ಸದಾ ದೃಢವಾಗಿ ನಿಲ್ಲುತ್ತದೆ ಎಂದು ಪುನರುಚ್ಚರಿಸಿದ ಅವರು, ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.