ಬೆಂಗಳೂರು : ಕೆಂಗೇರಿಯ ಬಿಜಿಎಸ್‌ ಗ್ರೌಂಡ್‌ನಲ್ಲಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಆಯೋಜಿಸಿದ್ದ 18ನೇ ಬಿಜಿಎಸ್‌ ಸಂಸ್ಥಾಪನಾ ದಿನ ಹಾಗೂ ಬಿಜಿಎಸ್‌ ಉತ್ಸವ–2026ನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌  ಉದ್ಘಾಟಿಸಿದರು.ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ   ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಮಂತ್ರಾಲಯ ಮಠದ ಪೀಠಾಧಿಪತಿ  ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಈ ವೇಳೆ   ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ, ಸಚಿವ ಹೆಚ್.ಸಿ. ಬಾಲಕೃಷ್ಣ, ಶಾಸಕ ಎಸ್.ಟಿ. ಸೋಮಶೇಖರ್, ನಟ  ಗಣೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.