ಆರ್ಥಿಕ ಸಮಸ್ಯೆಯೇ ಗೃಹಲಕ್ಷ್ಮಿ ಬಿಡುಗಡೆಯಾಗದಿರಲು ಕಾರಣ : ಸರ್ಕಾರದಿಂದ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಬೇಕಾದ ಎರಡು ತಿಂಗಳ ಹಣ ಬಿಡುಗಡೆಯಾಗದಿರುವುದಕ್ಕೆ ಆರ್ಥಿಕ ಸಮಸ್ಯೆಯೇ ಕಾರಣ ಎಂದು ತಿಳಿಸಿದೆ.2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣವನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ. ಹಣಕಾಸಿನ ಕೊರತೆಯಿಂದಾಗಿ ಎರಡು ತಿಂಗಳ ಹಣ ವಿತರಣೆ ಸಾಧ್ಯವಾಗಿಲ್ಲ ಎಂದು ಸರ್ಕಾರದ ಪರವಾಗಿ ಸ್ತ್ರೀಶಕ್ತಿ ಯೋಜನಾಧಿಕಾರಿ ಸೋನಲ್ ಎಸ್. ಐಗಲ್ ಅವರು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.ಈ ಯೋಜನೆಯು ಮಹಿಳೆಯರ ಅನುಕೂಲಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಯಾಗಿದೆ. ಆದರೆ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿಸುವುದನ್ನು ಕಾನೂನುಬದ್ಧ ನಿರೀಕ್ಷೆಯ ಹಕ್ಕು ಎಂದು ಪರಿಗಣಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸರ್ಕಾರ ತನ್ನ ಪ್ರಮಾಣಪತ್ರದಲ್ಲಿ ವಾದಿಸಿದೆ. ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವನ್ನು ಫಲಾನುಭವಿಯ ಕಾನೂನುಬದ್ಧ ಹಕ್ಕಾಗಿ ಅಥವಾ ಕಡ್ಡಾಯವಾಗಿ ದೊರೆಯಬೇಕಾದ ಸೌಲಭ್ಯವಾಗಿ ಪರಿಗಣಿಸಲಾಗದು ಎಂದು ಸರ್ಕಾರ ತಿಳಿಸಿದ್ದು, ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಬ್ಬರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ನಡೆಸಿದ್ದು, ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗಳಿಗೆ ಪ್ರತಿಕ್ರಿಯೆ ನೀಡಲು ಅರ್ಜಿದಾರರಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಸಂಬಂಧಿತ ಸುದ್ದಿಗಳು

ಮಲೆ ಮಹದೇಶ್ವರ ಬೆಟ್ಟದಲ್ಲಿ ರೈಲ್ವೆ ಬ್ಯಾರಿಕೇಡ್ ಸೇರಿದಂತೆ ಪ್ರಮುಖ ನಿರ್ಣಯ ಕೈಗೊಂಡ ಸಚಿವ ಸಂಪುಟ
ಬೆಂಗಳೂರು :ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ…
◷ 05/11/2026
ಹಳ್ಳಿಗುಗ್ಗು ಹೇಳಿಕೆ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಹೆಚ್.ಡಿ ಕುಮಾರಸ್ವಾಮಿ ಹಳ್ಳಿ ಗುಗ್ಗು ಎಂಬ ಹೇಳಿಕೆಯನ್ನು ಮತ್ತೊಮ್ಮೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಥಿಸಿಕೊ…
◷ 05/11/2026
ಕನ್ನಡ ನಾಮಫಲಕಗಳ ಅನಾವರಣ
ಬೆಂಗಳೂರು : ಇಂದು ವಿಧಾನಸೌಧದ ಸಚಿವ ಸಂಪುಟ ಸಭೆ ಕೊಠಡಿಯ ಕಾರಿಡಾರ್ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಳವಡಿಸಲಾಗಿರು…
◷ 05/11/2026
ಬಿಡಾಡಿ ದನಗಳ ಹಾವಳಿ : ವಾಹನ ಸವಾರರಿಗೆ ಸಂಚಾರದ ಕಿರಿಕಿರಿ
ಗುಂಡ್ಲುಪೇಟೆ : ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ಮತ್…
◷ 05/11/2026
