ಹನೂರು : ತಾಲೂಕಿನ ಕಾಡಂಚಿನ ಇಂಡಿಗನತ್ತ ಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ಮನೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಮನೆಯೊಳಗಿದ್ದ ಅಜ್ಜಿ ಹಾಗೂ ಮೊಮ್ಮಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗ್ರಾಮದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಮನೆಯಲ್ಲಿದ್ದ ಮಹದೇವಮ್ಮ ಹಾಗೂ ಅವರ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ ಘಟನೆಯಿಂದ ಕುಟುಂಬದವರು ಆತಂಕಕ್ಕೊಳಗಾಗಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಕ್ಕೆ   ಸೂಕ್ತ ಪರಿಹಾರ ಕಲ್ಪಿಸಬೇಕು. ಮನೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ಕುಟುಂಬಕ್ಕೆ ನೆರವಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.