ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಬಳಕೆ : ಸಚಿವ ರಿಜ್ವಾನ್ ಅರ್ಷದ್ ಆರೋಪ

ಬೆಂಗಳೂರು : ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದ್ದು ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ ತರುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಗಂಭೀರ ಆರೋಪ ಮಾಡಿದ್ದಾರೆ.ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಡೆಸಿದ ಪ್ರಯೋಗಾಲಯ ಪರೀಕ್ಷಾ ವರದಿಗಳನ್ನು ಬಹಿರಂಗಪಡಿಸಿ ಕೇಂದ್ರ ಸರ್ಕಾರ ಹಾಗೂ ತೈಲ ಕಂಪನಿಗಳ ವಿರುದ್ಧ ವಾಗ್ದಾಳಿ ನಡೆಸಿದರು.ಪೆಟ್ರೋಲ್‌ನಲ್ಲಿ ಎಥೆನಾಲ್ ಬಳಕೆ ಕುರಿತು ವ್ಯಾಪಕ ಗೊಂದಲ ಹಾಗೂ ಮಾಧ್ಯಮ ವರದಿಗಳು ಬಂದ ಹಿನ್ನೆಲೆಯಲ್ಲಿ, ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಒಟ್ಟು 63 ಇಂಧನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿತ್ತು. ಆರಂಭದಲ್ಲಿ ಇ-20 ಪರೀಕ್ಷೆಗಾಗಿ ತೈಲ ಮಾರುಕಟ್ಟೆ ಕಂಪನಿಗಳ ಅಧಿಕೃತ ಲ್ಯಾಬ್‌ಗಳಿಗೆ ಕಳುಹಿಸಲಾಯಿತಾದರೂ ಅಲ್ಲಿ ಎಥೆನಾಲ್ ಪ್ರಮಾಣದ ನಿಖರ ಮಾಹಿತಿ ನೀಡಲು ಹಿಂದೇಟು ಹಾಕಲಾಯಿತು. ಹೀಗಾಗಿ ಮಾನ್ಯತೆ ಪಡೆದ ಖಾಸಗಿ ಪ್ರಯೋಗಾಲಯಕ್ಕೆ ಕಳುಹಿಸಲಾದ 7 ಸ್ಯಾಂಪಲ್‌ಗಳ ಪೈಕಿ 5 ಸ್ಯಾಂಪಲ್‌ಗಳಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಇರುವುದು ದೃಢಪಟ್ಟಿದೆ. ಕೆಲವು ಮಾದರಿಗಳಲ್ಲಿ ಎಥೆನಾಲ್ ಪ್ರಮಾಣ ಬರೋಬ್ಬರಿ ಶೇ. 31.02 ರಷ್ಟಿರುವುದು ಪತ್ತೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಜೀವ ವೈವಿಧ್ಯವನ್ನು ಉಳಿಸಲು ಉರಗ ಅತ್ಯವಶ್ಯ: ಮ.ನ. ಪ್ರಸನ್ನ ಕುಮಾರ್ ಹೇಳಿಕೆ
ಮದ್ದೂರು : ಉರಗಗಳು ಭೂಮಿಯ ಮೇಲಿನ ಪ್ರಮುಖ ಜೀವಿಗಳಲ್ಲಿ ಒಂದಾಗಿದ್ದು ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಮತ್ತು ಜೀವ ವೈವಿಧ್ಯ…
◷ 06/11/2026
ಬೋಳುಗುಡ್ಡ ಕ್ಯಾಂಪ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್ಗ…
◷ 06/11/2026
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾ…
◷ 06/11/2026
ರಾಹುಲ್ ಗಾಂಧಿಯಿಂದ ಅರಾಜಕತೆ ಸೃಷ್ಟಿಸಲು ಅನಗತ್ಯ ಯತ್ನ : ಗೌರವ್ ಭಾಟಿಯಾ ವಾಗ್ದಾಳಿ
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸಿ ವಿಫಲರಾಗಿದ್ದಾರೆ ಎಂದು ಬ…
◷ 06/11/2026
