ಹಾಲು, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯುವಂತೆ ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ಚಾಮರಾಜನಗರ: ಹಾಲು ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್ ಕರ್ನಾಟಕದ ಚಾಮರಾಜನಗರ ಘಟಕ ಒತ್ತಾಯಿಸಿದೆ.ಈ ಕುರಿತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪದಾಧಿಕಾರಿಗಳು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಆರ್ಥಿಕ ಸಂಕಷ್ಟದಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಡುವೆ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಿಸಿರುವುದು ಕುಟುಂಬಗಳ ದೈನಂದಿನ ಜೀವನದ ಮೇಲೆ ಮತ್ತಷ್ಟು ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.ಹಾಲು ಕೇವಲ ಆಹಾರ ಪದಾರ್ಥವಲ್ಲ, ಮಕ್ಕಳ, ಗರ್ಭಿಣಿಯರ, ಹಾಲುಣಿಸುವ ತಾಯಂದಿರ ಹಾಗೂ ವೃದ್ಧರ ಪೌಷ್ಠಿಕ ಆಹಾರದ ಪ್ರಮುಖ ಭಾಗವಾಗಿದೆ. ಹಾಲಿನ ಬೆಲೆ ಏರಿಕೆಯಿಂದ ವಿಶೇಷವಾಗಿ ಮಹಿಳೆಯರು ಕುಟುಂಬದ ಖರ್ಚು ನಿರ್ವಹಿಸುವಲ್ಲಿ ಹೆಚ್ಚಿನ ಆರ್ಥಿಕ ಒತ್ತಡ ಎದುರಿಸಬೇಕಾಗುತ್ತದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶ ಒದಗಿಸುವುದೂ ಕಷ್ಟವಾಗಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.ಹಾಲಿನ ಜೊತೆಗೆ ಮೊಸರು, ತುಪ್ಪ, ಬೆಣ್ಣೆ, ಮಜ್ಜಿಗೆ ಹಾಗೂ ಪನೀರ್ ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯೂ ಕುಟುಂಬಗಳ ಮಾಸಿಕ ಆಹಾರ ವೆಚ್ಚವನ್ನು ಹೆಚ್ಚಿಸಲಿದೆ. ರೈತರ ಹಿತಾಸಕ್ತಿ ಕಾಪಾಡುವುದು ಎಷ್ಟು ಮುಖ್ಯವೋ, ಗ್ರಾಹಕರಾದ ಬಡ ಮತ್ತು ಮಧ್ಯಮ ವರ್ಗದ ಜನರ ಹಿತಾಸಕ್ತಿಯನ್ನು ರಕ್ಷಿಸುವುದೂ ಅಷ್ಟೇ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಬಡ ಕುಟುಂಬಗಳ ಆಹಾರ ಭದ್ರತೆ ಹಾಗೂ ಮಕ್ಕಳ ಪೌಷ್ಠಿಕತೆ ಕಾಪಾಡಬೇಕು. ರೈತರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಪರ್ಯಾಯ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಗ್ರಾಹಕರಿಗೂ ಹೊರೆಯಾಗದ ಸಮತೋಲಿತ ಬೆಲೆ ನೀತಿ ಜಾರಿಗೊಳಿಸಬೇಕು. ಬೆಲೆ ನಿಗದಿ ಪ್ರಕ್ರಿಯೆಯಲ್ಲಿ ಗ್ರಾಹಕರು, ಮಹಿಳಾ ಸಂಘಟನೆಗಳು ಹಾಗೂ ರೈತರ ಅಭಿಪ್ರಾಯಗಳಿಗೆ ಆದ್ಯತೆ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಸಂಬಂಧಿತ ಸುದ್ದಿಗಳು

ಜೀವ ವೈವಿಧ್ಯವನ್ನು ಉಳಿಸಲು ಉರಗ ಅತ್ಯವಶ್ಯ: ಮ.ನ. ಪ್ರಸನ್ನ ಕುಮಾರ್ ಹೇಳಿಕೆ
ಮದ್ದೂರು : ಉರಗಗಳು ಭೂಮಿಯ ಮೇಲಿನ ಪ್ರಮುಖ ಜೀವಿಗಳಲ್ಲಿ ಒಂದಾಗಿದ್ದು ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಮತ್ತು ಜೀವ ವೈವಿಧ್ಯ…
◷ 06/11/2026
ಬೋಳುಗುಡ್ಡ ಕ್ಯಾಂಪ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್ಗ…
◷ 06/11/2026
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾ…
◷ 06/11/2026
ರಾಹುಲ್ ಗಾಂಧಿಯಿಂದ ಅರಾಜಕತೆ ಸೃಷ್ಟಿಸಲು ಅನಗತ್ಯ ಯತ್ನ : ಗೌರವ್ ಭಾಟಿಯಾ ವಾಗ್ದಾಳಿ
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸಿ ವಿಫಲರಾಗಿದ್ದಾರೆ ಎಂದು ಬ…
◷ 06/11/2026
