ಯಾದಗಿರಿ ಜಿಲ್ಲೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಯಾದಗಿರಿ: ಶುಕ್ರವಾರ ನಗರದಲ್ಲಿ ಇಲ್ಲಿನ ನಾರಾಯಣಪುರದ ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನ.30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮಾಜಿ ಸಚಿವ ರಾಜೂಗೌಡ ಅವರ ನೇತೃತ್ವದಲ್ಲಿ ವಿವಿಧ ರೈತಪರ ಹಾಗೂ ಸಾರ್ವಜನಿಕ ಸಂಘಟನೆಗಳು ಕರೆ ನೀಡಿದ್ದ ಯಾದಗಿರಿ ಜಿಲ್ಲೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಬೆಳಗ್ಗೆಯಿಂದಲೇ ಬಂದ್ ಚಟುವಟಿಕೆಗಳು ಚುರುಕುಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳಲ್ಲಿನ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದವು. ಇದರಿಂದ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡು, ಎಂದಿನ ದಿನಗಳಿಗಿಂತ ಜನಸಂಚಾರವೂ ಕಡಿಮೆಯಾಗಿತ್ತು.ಬೆಳಗ್ಗೆಯೇ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. 'ಬೇಕೇ ಬೇಕು ನೀರು ಬೇಕು, ಕೊಡಿ ಕೊಡಿ ನೀರು ಕೊಡಿ' ಎಂಬ ಘೋಷಣೆಗಳನ್ನು ಮೊಳಗಿಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಸುಭಾಶ್ಚಂದ್ರ ಬೋಸ್ ವೃತ್ತ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಬಂದ್‌ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.ನೀರಿನ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಬಾರದು. ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ತತ್ ಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದರು.
ಸಂಬಂಧಿತ ಸುದ್ದಿಗಳು

ಜೀವ ವೈವಿಧ್ಯವನ್ನು ಉಳಿಸಲು ಉರಗ ಅತ್ಯವಶ್ಯ: ಮ.ನ. ಪ್ರಸನ್ನ ಕುಮಾರ್ ಹೇಳಿಕೆ
ಮದ್ದೂರು : ಉರಗಗಳು ಭೂಮಿಯ ಮೇಲಿನ ಪ್ರಮುಖ ಜೀವಿಗಳಲ್ಲಿ ಒಂದಾಗಿದ್ದು ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಮತ್ತು ಜೀವ ವೈವಿಧ್ಯ…
◷ 06/11/2026
ಬೋಳುಗುಡ್ಡ ಕ್ಯಾಂಪ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್ಗ…
◷ 06/11/2026
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾ…
◷ 06/11/2026
ರಾಹುಲ್ ಗಾಂಧಿಯಿಂದ ಅರಾಜಕತೆ ಸೃಷ್ಟಿಸಲು ಅನಗತ್ಯ ಯತ್ನ : ಗೌರವ್ ಭಾಟಿಯಾ ವಾಗ್ದಾಳಿ
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸಿ ವಿಫಲರಾಗಿದ್ದಾರೆ ಎಂದು ಬ…
◷ 06/11/2026
