ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಕುಮಾರ್ ಪುಷ್ಕರ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಡಾ. ಮನೋಜ್ ರಾಜನ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನಂದೀಶ್ ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.