ಬೆಂಗಳೂರು : ಪುಲಕೇಶಿ ನಗರದಲ್ಲಿ ಸರಿಯಾಗಿ ಕುಡಿಯುವ ನೀರು ಪೂರೈಕೆ ಮಾಡುತ್ತಿಲ್ಲ, ಸಮರ್ಪಕ ಮೂಲಸೌಕರ್ಯಗಳನ್ನು ಒದಗಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡರು.ನಗರಕ್ಕೆ ಸಮರ್ಪಕ ಮೂಲಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರವು  ಕೇವಲ ಬೆಲೆ ಏರಿಕೆ ಮಾಡಿಕೊಂಡು ಹಣಕಾಸು ಪರಿಸ್ಥಿತಿ ನಿಭಾಯಿಸುತ್ತಿದೆ. ಪುಲಕೇಶಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಸುಮಾರು ₹250 ಕೋಟಿಗೂ ಹೆಚ್ಚು ತೆರಿಗೆ ಹಣ ಲೂಟಿಯಾಗಿದ್ದು, ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಸಚಿವರು ಆರೋಪಿಸಿದರು.ಗ್ರೇಟರ್ ಬೆಂಗಳೂರು ಜೆಡಿಎಸ್‌ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ   ಸೇರಿದಂತೆ ಅನೇಕ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.